Thursday, June 4, 2026
Homeಕರಾವಳಿಉಡುಪಿಉಡುಪಿ; ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ; ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ

ಉಡುಪಿ; ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ; ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡ

- Advertisement -
- Advertisement -

ಉಡುಪಿ: ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿದ್ದು, ಕೆಲವೊಂದು ಮಹತ್ವ ಸುಳಿವಿನ ಆಧಾರದಲ್ಲಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ಕಾರ್ಕಳ ಡಿವೈಎಸ್ಪಿ ಅರವಿಂದ್ ಕುಲಗುಜ್ಜಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಒಂದು ತಂಡ ಆರೋಪಿಗಳ ಸುಳಿವಿನ ಆಧಾರದಲ್ಲಿ ದ.ಕ. ಜಿಲ್ಲೆಗೆ ತೆರಳಿದೆ ಎನ್ನಲಾಗಿದೆ.

ಒಂದು ತಂಡ ಮೃತ ಶರತ್ ಶೆಟ್ಟಿ ಮೊಬೈಲ್ ಹಾಗೂ ಸಿಸಿಟಿವಿ ವಿಡಿಯೋ ಆಧಾರದಲ್ಲಿ ಉಡುಪಿಯಲ್ಲಿ ಮಾಹಿತಿ ಕಲೆ ಹಾಕುತ್ತಿದೆ. ಅಲ್ಲದೆ ಕೊಲೆಗೆ ಸಂಬಂಧಿಸಿ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.

- Advertisement -

Latest News

error: Content is protected !!