Sunday, June 7, 2026
Homeಕರಾವಳಿಉಡುಪಿಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ಪೊಲೀಸರು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಮೊಬೈಲ್ ಕಳೆದುಕೊಂಡವರು ತಾವು ಕಳೆದುಕೊಂಡಿದ್ದ ಮೊಬೈಲ್ ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್ ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್ ಪಿ ಇ-ಲಾಸ್ಟಸ್ಟ್ ನಲ್ಲಿ ದೂರು ದಾಖಲಿಸಿದ್ದರು.

ಅದರಂತೆ ಒಟ್ಟು 3,53,400 ರೂ. ಮೌಲ್ಯದ ಒಟ್ಟು 18 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಉಡುಪಿ ಡಿವೈಎಸ್ಪಿ ಪ್ರಭು ಡಿಟಿ ಅವರು ವಾರೀಸುದಾರರಿಗೆ ಹಸ್ತಾಂತರಿಸಿದರು. ಮೊಬೈಲ್ ಕಳೆದುಕೊಂಡವರು ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದ್ದು, ಅದರ ಮಾಹಿತಿ ಸ್ಥಳೀಯ ಪೊಲೀಸ್‌ ಠಾಣೆಗೆ ಲಭ್ಯವಾಗುತ್ತದೆ. ಅದರಂತೆ ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ.

- Advertisement -

Latest News

error: Content is protected !!