Saturday, June 6, 2026
Homeಕರಾವಳಿಸಿಎಂ ಬೊಮ್ಮಾಯಿ ಬಂದೋಬಸ್ತ್ ನಲ್ಲಿದ್ದಾಗ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ

ಸಿಎಂ ಬೊಮ್ಮಾಯಿ ಬಂದೋಬಸ್ತ್ ನಲ್ಲಿದ್ದಾಗ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ

- Advertisement -
- Advertisement -

ಮಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ವೇಳೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಹೆಗಡೆ ಗಾಯಗೊಂಡವರು.

ಮಂಜುನಾಥ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ವಾಹನಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೋವೊಂದರ ಚಾಲಕನ ನಿಯಂತ್ರಣ ಕಳೆದು ಪೊಲೀಸ್ ಪೇದೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಹಾಗೂ ಕೈಗಳಿಗೆ ಗಾಯಗಳಾಗಿವೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!