Wednesday, June 24, 2026
Homeಕರಾವಳಿಉಡುಪಿಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮೂಲಕ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರ

ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮೂಲಕ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರ

- Advertisement -
- Advertisement -

ಉಡುಪಿ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಜೀಪ್ ಒದಗಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ಮನವಿಯ ಮೇರೆಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಪೊಲೀಸ್ ಜೀಪ್ ಒದಗಿಸಿದ್ದಾರೆ.

ಪೊಲೀಸ್ ಜೀಪ್ ವಾಹನವನ್ನು ಪೊಲೀಸ್ ಇಲಾಖೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶಾಸಕ ಯಶಪಾಲ್ ಸುವರ್ಣ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!