Sunday, June 7, 2026
Homeತಾಜಾ ಸುದ್ದಿನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳ ಸಿದ್ಧತೆ

ನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳ ಸಿದ್ಧತೆ

- Advertisement -
- Advertisement -

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಬಯಲಾಗುತ್ತಿದ್ದಂತೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದೀಗ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಜೈಲಾಧಿಕಾರಿಗಳು ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ವಿಲ್ಸನ್ ಗಾರ್ಡನ್ ನಾಗ ಹಾಗೂ ನಟ ದರ್ಶನ್, ರೇಣುಕಾಸ್ವಾಮಿ ಹತ್ಯೆ ಆರೋಪಿಗನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಈಗಾಗಲೇ ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಕುರಿತಂತೆ ಈಗಾಗಲೇ ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಕೋರ್ಟ್ ಅನುಮತಿಗಾಗಿ ಕಾಯುತ್ತಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಡಿ ಗ್ಯಾಂಗ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಹಿಂಡಲಗಾ ಜೈಲಿನಲ್ಲಿ ಅಂದೇರಿ ಸೆಲ್ ಗುರುತಿಸಿದ್ದಾರೆ ಎಂದು ಹೇಳಲಾಗಿದೆ.ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆ ಬೆಳಗಾವಿ ಜೈಲಿನಲ್ಲಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!