Friday, June 5, 2026
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

- Advertisement -
- Advertisement -

ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ.

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ಕನ್ನಡ ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

ಯಾರ್ಯಾರು ಶಂಕಿತರು ಇದ್ದಾರೋ ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿ, ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ನಡೆಯಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!