Thursday, June 4, 2026
Homeತಾಜಾ ಸುದ್ದಿಕ್ಯಾಸಿನೊ ಮದ್ಯದ ಡ್ಯಾನ್ಸ್‌ ಪಾರ್ಟಿ ಮೇಲೆ ಪೊಲೀಸರ ದಾಳಿ: ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ಸೇರಿದಂತೆ...

ಕ್ಯಾಸಿನೊ ಮದ್ಯದ ಡ್ಯಾನ್ಸ್‌ ಪಾರ್ಟಿ ಮೇಲೆ ಪೊಲೀಸರ ದಾಳಿ: ಕರ್ನಾಟಕದ ದೊಡ್ಡ ದೊಡ್ಡ ಅಧಿಕಾರಿಗಳು ಸೇರಿದಂತೆ 84 ಜನ ಅರೆಸ್ಟ್‌

- Advertisement -
- Advertisement -

ಜೈಪುರದ ಕ್ಯಾಸಿನೊ ಮದ್ಯದ ಡ್ಯಾನ್ಸ್‌ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕರ್ನಾಟಕದ ಅಧಿಕಾರಿಗಳು ಸೇರಿ 84 ಜನರನ್ನ ಅರೆಸ್ಟ್‌ ಮಾಡಲಾಗಿದೆ.

ಜೈಸಿಂಗ್‌ಪುರ ಖೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಮದ್ಯದ ಡ್ಯಾನ್ಸ್ ಪಾರ್ಟಿ ಮೇಲೆ ಜೈಪುರ ಪೊಲೀಸ್ ಕಮಿಷನರೇಟ್ ವಿಶೇಷ ತಂಡ ಶನಿವಾರ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಘಟನಾ ಸ್ಥಳದಿಂದ 13 ಹುಡುಗಿಯರು ಸೇರಿದಂತೆ 84 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಕರ್ನಾಟಕದ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಈ ಫಾರ್ಮ್‌ಹೌಸ್ ಬುಕ್ ಮಾಡಿರುವುದು ಬೆಳಕಿಗೆ ಬಂದಿದೆ. ಅದರ ಮೇಲೆ ಪೊಲೀಸರು ರಾತ್ರಿ 2 ಗಂಟೆಗೆ ದಾಳಿ ನಡೆಸಿದ್ದು, ಕಾರ್ಯಕ್ರಮದ ಆಯೋಜಕರು ಸೇರಿದಂತೆ 84 ಜನರನ್ನು ಬಂಧಿಸಿದ್ದಾರೆ. ಇದಲ್ಲದೇ 13 ನೃತ್ಯ ಹುಡುಗಿಯರೂ ಸಿಕ್ಕಿಬಿದ್ದಿದ್ದಾರೆ. ಇವರನ್ನೆಲ್ಲಾ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡಲು ಹೊರಗಿನಿಂದ ಕರೆಸಲಾಗಿತ್ತು. ಅಲ್ಲಿದ್ದವರಿಂದ 23 ಲಕ್ಷ 71 ಸಾವಿರ ರೂಪಾಯಿ ವಶಪಡಿಸಿಕೊಳ್ಳಲಾಗಿದ್ದು, ಮದ್ಯದ ಬಾಟಲಿಗಳು, ಹುಕ್ಕಾ, ಪ್ಲೇಯಿಂಗ್ ಕಾರ್ಡ್‌ಗಳು, 14 ಐಷಾರಾಮಿ ಕಾರುಗಳು ಮತ್ತು 1 ಟ್ರಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಬಂಧಿತರಾದವರಲ್ಲಿ ಕರ್ನಾಟಕ ಪೊಲೀಸ್ ಇನ್ಸ್‌ಪೆಕ್ಟರ್, ಬೆಂಗಳೂರಿನ ತಹಸೀಲ್ದಾರ್ ಮತ್ತು ಕಾಲೇಜು ಪ್ರಾಧ್ಯಾಪಕರು ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕ್ರೈಂ ಬ್ರಾಂಚ್ ತಂಡ ದಾಳಿ ನಡೆಸಿದೆ ಎಂದು ಎಸಿಪಿ ಲಂಬಾ ತಿಳಿಸಿದ್ದಾರೆ.

- Advertisement -

Latest News

error: Content is protected !!