Thursday, June 4, 2026
Homeಕರಾವಳಿಕಡಬ; ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ;ಓರ್ವ ಆರೋಪಿಯ ಬಂಧನ

ಕಡಬ; ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ;ಓರ್ವ ಆರೋಪಿಯ ಬಂಧನ

- Advertisement -
- Advertisement -

ಕಡಬ: ಅಕ್ರಮ‌ ಕಸಾಯಿಖಾನೆ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿರುವ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.


ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 40 ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್‌ಐ ರುಕ್ಮನಾಯ್ಕ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

- Advertisement -

Latest News

error: Content is protected !!