ಬೆಳ್ತಂಗಡಿ; ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕ್ರಣ ದಾಖಲಿಸಿದ್ದಾರೆ
ಕಳಿಯ ಗ್ರಾಮದ ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ವಾಹನ ಪರಿಶೀಲನೆ ನಡೆಸಿದಾಗ ಇದೆ ದಾರಿಯಾಗಿ ಮರಳು ತುಂಬಿದ ಒಂದು ಲಾರಿ ಹಾಗೂ ಪಿಕಪ್ ವಾಹನ ಬಂದಿದ್ದು ಪೊಲೀಸರನ್ನು ನೋಡಿ ಪಿಕಪ್ ಚಾಲಕ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಚಾಲಕ ಮಹಮ್ಮದ್ ನೌಫಾಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲದಿರುವುದು ಕಂಡು ಬಂದಿದೆ. ಅದೇ ರೀತಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಮರಳಿಗೂ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ ಈ ಹಿನ್ನಲೆಯಲ್ಲಿ ಈಚರ್ ಲಾರಿ ಹಾಗೂ ಪಿಕಪ್ ವಾಹನವನ್ನು ಹಾಗೂ ವಾಹನದಲ್ಲಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಎರಡು ವಾಹನಗಳ ಚಾಲಕರ ಹಾಗೂ ವಾಹನಗಳ ಮಾಲೀಕರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ


