Saturday, June 6, 2026
Homeಕರಾವಳಿಬಂಟ್ವಾಳ; ವಿಟ್ಲದ ಬೊಳಂತೂರಿನಲ್ಲಿ ಮಹಮ್ಮದ್ ತಬ್ಸೀರ್ ಎಂಬವರ ಮನೆ ಮೇಲೆ ಪೊಲೀಸರ ದಾಳಿ

ಬಂಟ್ವಾಳ; ವಿಟ್ಲದ ಬೊಳಂತೂರಿನಲ್ಲಿ ಮಹಮ್ಮದ್ ತಬ್ಸೀರ್ ಎಂಬವರ ಮನೆ ಮೇಲೆ ಪೊಲೀಸರ ದಾಳಿ

- Advertisement -
- Advertisement -

ಬಂಟ್ವಾಳ: ರಾಜ್ಯದ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೋಲೀಸರ ತಂಡ ಮುಂಜಾನೆ ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೋಲೀಸರ ತಂಡ ದಾಳಿ ನಡೆಸಿದೆ. ಈ ದಾಳಿ ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿಲ್ಲ.

ವಿಚಾರಣೆಯ ದೃಷ್ಟಿಯಿಂದ ಗೌಪ್ಯತೆ ಕಾಪಾಡಲು ರಾಜ್ಯ ಪೋಲೀಸರ ನಿರ್ದೇಶನದಂತೆ ಅವರು ಮಾಹಿತಿ ನೀಡುತ್ತಿಲ್ಲ ಎಂಬ ವಿಚಾರ ಲಭ್ಯವಾಗಿದೆ. ರಾಜ್ಯದ ಪ್ರಕರಣವೊಂದಕ್ಕೆ ಹಲವು ವಿಚಾರಗಳನ್ನು ಕುರಿತು ಈ ದಾಳಿ ನಡೆದಿದ್ದು, ತಬ್ಸೀರ್ ಅವರಿಗೆ ಸೇರಿದ ಎರಡು ಮನೆಗಳಿಗೆ ಅಂದರೆ ಒಂದು ಹಳೆಯ ಮನೆ ಹಾಗೂ ಹೊಸ ಮನೆಗಳಿಗೆ ದಾಳಿ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ,ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ನಗರ ಠಾಣಾ ಪೋಲೀಸ್ ಎಸ್. ಐ.ಅವಿನಾಶ್, ಗ್ರಾಮಾಂತರ ಎಸ್ ಐ ಹರೀಶ್, ವಿಟ್ಲ ಎಸ್.ಐ.ಸಂದೀಪ್  ಸಹಿತ ಇಡೀ ಪೋಲೀಸ್ ತಂಡ ಇಲ್ಲಿ ಮೊಕ್ಕಾಂ ಇದ್ದು ಭದ್ರತೆ ಒದಗಿಸಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!