Saturday, April 27, 2024
Homeಕರಾವಳಿಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿ ಮೇಲೆ ಪೊಲೀಸರ ದಾಳಿ

ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿ ಮೇಲೆ ಪೊಲೀಸರ ದಾಳಿ

spot_img
- Advertisement -
- Advertisement -

ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಪೊಲೀಸರು ದಾಳಿ ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ನ ಹಿಂಬದಿಯ ಒಳಸಂದಿನಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ದಾಳಿ ಮಾಡಿದೆ. ಈ ವೇಳೆ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್ ಗಳನ್ನು ವಶಕ್ಕೆ ಪಡೆದಿದೆ.

ಯುವ ಜನತೆಯನ್ನು ಆಕರ್ಷಿಸುವ ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಇದು ರಾಜ್ಯದಲ್ಲೇ ಅಪರೂಪದ ಪ್ರಕರಣವಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!