ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ದಿನಾಂಕ: 18-03-2026 ರಂದು ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯು ಮುಗಿದ ಬಳಿಕ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ರವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೂಂಡು ಕೋಳಿಗಳಿಗೆ ಹರಿತವಾದ ಬಾಳ್ ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದು ಈ ಬಗ್ಗೆ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಅರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಲುಗಳನ್ನು ವಶಕ್ಕೆ ಪಡೆದು ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಅರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.


