Wednesday, June 24, 2026
Homeಕರಾವಳಿಮಂಗಳೂರುವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ; ನಾಲ್ವರ ಬಂಧನ

- Advertisement -
- Advertisement -

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿರುವ ಘಟನೆ ವಿಟ್ಲಮುಡ್ನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪೂಜಾರಿಯವರ ತೋಟದ ಬಳಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿ 25 ಜನವರಿ 2026ರಂದು ಮಧ್ಯಾಹ್ನ ಕೋಳಿ ಅಂಕ ಜೂಜಾಟದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬರುತ್ತಿದ್ದುದನ್ನು ಕಂಡು ಕೆಲವರು ಪರಾರಿಯಾಗಿದ್ದು, ಮಹೇಶ್, ಬಾಬು, ಆನಂದ ಮತ್ತು ಅಣ್ಣು ಎಂಬ ನಾಲ್ವರನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.

ಸ್ಥಳದಿಂದ ರೂ. 4,390 ನಗದು ಹಣ, 8 ಹುಂಜಗಳು (ಅಂದಾಜು ಮೌಲ್ಯ ರೂ. 4,550) ಹಾಗೂ 10 ಕೋಳಿ ಬಾಳುಗಳು (ಅಂದಾಜು ಮೌಲ್ಯ ರೂ. 500)ಗಳನ್ನು ಪಂಚರ ಸಮಕ್ಷಮ ಮಹಜರ್ ಮೂಲಕ ವಶಪಡಿಸಿಕೊಳ್ಳಲಾಗಿದೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!