ಬೆಳ್ತಂಗಡಿ: ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲಿನ , ಉಸ್ಮಾನ್ ಎಂಬವರ ಅಡಿಕೆ ತೋಟದಲ್ಲಿ ನಡೆದಿದೆ.
ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಿಶೋರ್ ಪಿ ರವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಓಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಸುಮಾರು 10 ಕಿಲೋ ಗ್ರಾಂ ಜಾನುವಾರಿನ ಮಾಂಸ, ದೇಹದ ಇತರೆ ಭಾಗಗಳು, ಬ್ಯಾಟರಿ ಚಾಲಿತ ತೂಕದ ಯಂತ್ರ-1, ಚಾಕು ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿದೆ. ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ ಸುಮಾರು ರೂ. 5,250/- ಆಗಿರುತ್ತದೆ.
ಈ ಬಗ್ಗೆ ಆರೋಪಿತ ಉಸ್ಮಾನ್ ಮತ್ತು ಸಲೀಂ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 66/2024, ಕಲಂ: ಕಲಂ: 4,12 ಕರ್ನಾಟಕ ಗೋಹತ್ಯೆ ನಿಷೇದ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020 ರಂತೆ ಪ್ರಕರಣ ದಾಖಲಾಗಿರುತ್ತದೆ.