Sunday, June 7, 2026
Homeಕರಾವಳಿಉಡುಪಿಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಬಾಲಕಿಯ ಪತ್ತೆಗಾಗಿ ಪೊಲೀಸರ ಮೊರೆ...!

ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಬಾಲಕಿಯ ಪತ್ತೆಗಾಗಿ ಪೊಲೀಸರ ಮೊರೆ…!

- Advertisement -
- Advertisement -

ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಬಾಲಕಿಯೊಬ್ಬಳ ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೇರಿ ಡಿ’ಸೋಜಾ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ನಿವಾಸಿಯಾಗಿರುವ ಅವಿನಾ (16) ಎಂಬ ಬಾಲಕಿ 2021 ಏಪ್ರಿಲ್ 13 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಈಗಾಗಲೇ ಆಕೆಯ ಪೋಷಕರು ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ವರೆಗೆ ಆಕೆಯ ಇರುವಿಕೆ ಅಥವಾ ಪತ್ತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಆಕೆಯ ಪೋಷಕರು ಆತಂಕಿತರಾಗಿದ್ದಾರೆ.

ಆಕೆಯ ಪತ್ತೆಗಾಗಿ ಪೊಲೀಸ್ ಇಲಾಖೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಸಂಸ್ಥೆಯ ಗಮನದಲ್ಲಿ ದು. ಆದಷ್ಟು ಬೇಗ ಆಕೆಯನ್ನು ಪತ್ತೆ ಮಾಡುವ ಮೂಲಕ ನೊಂದ ಕುಟಂಬಕ್ಕೆ ನ್ಯಾಯ ಒದಗಿಸಿ ಕೊಡುವಂತೆ ಈ ವೇಳೆ ಮೇಳ ಡಿಸೋಜಾ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಹೆಚ್ಚುವರಿ ಪೊಲೀಸ್ ವರಿಷ್ಕಾಧಿಕಾರಿ ಕುಮಾರಚಂದ್ರ ಪೊಲೀಸ್ ಇಲಾಖೆ ಯುವತಿಯ ಪತ್ತೆಗಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

- Advertisement -

Latest News

error: Content is protected !!