Tuesday, May 7, 2024
Homeಕರಾವಳಿಮಂಗಳೂರಿನ ಖಾಸಗಿ ಕಾಲೇಜಿನಿಂದ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ : ತಮಿಳುನಾಡಿನ ಕೊಯಂಬತ್ತೂರಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಶೋಧ

ಮಂಗಳೂರಿನ ಖಾಸಗಿ ಕಾಲೇಜಿನಿಂದ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ : ತಮಿಳುನಾಡಿನ ಕೊಯಂಬತ್ತೂರಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಶೋಧ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಮೇರಿಹಿಲ್ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರು ನಾಪತ್ತೆಯಾಗಿ ಇಂದಿಗೆ ಮೂರು ದಿನ ಕಳೆದಿದೆ. ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ವಿದ್ಯಾರ್ಥಿನಿಯರು ರೈಲು ಮೂಲಕ ಕೊಯಂಬತ್ತೂರಿಗೆ ತೆರಳಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಈ ನಿಟ್ಟಿನಲ್ಲಿ ಶೋಧ ಕಾರ್ಯಕ್ಕೆ ಕಂಕನಾಡಿ ಪೊಲೀಸರ ತಂಡ ಅಲ್ಲಿಗೆ ತೆರಳಿದೆ.

ಕಾಲೇಜು ಆವರಣದಲ್ಲೇ ಇರುವ ಹಾಸ್ಟೆಲ್‌ ನಿಂದ ಬುಧವಾರ ಮುಂಜಾನೆ 3 ಗಂಟೆ ವೇಳೆಗೆ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮೂವರು ವಿದ್ಯಾರ್ಥಿನಿಯರಲ್ಲಿ ಇಬ್ಬರು ಬೆಂಗಳೂರು,ಒಬ್ಬರು ಚಿಕ್ಕಮಗಳೂರಿನವರಾಗಿದ್ದರು.

- Advertisement -
spot_img

Latest News

error: Content is protected !!