Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ: ಚೂರಿ ಇರಿತ ನಡೆದ ಬೋಳಿಯಾರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬಂಟ್ವಾಳ: ಚೂರಿ ಇರಿತ ನಡೆದ ಬೋಳಿಯಾರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

- Advertisement -
- Advertisement -

ಬಂಟ್ವಾಳ: ನಿನ್ನೆ ರಾತ್ರಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸ್ಥಳದಲ್ಲಿ ಮೂರು ಕೆಎಸ್ ಆರ್ ಪಿ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.ಚೂರಿ‌ ಇರಿತ ನಡೆದಿರುವ ಸ್ಥಳದಲ್ಲಿರುವ ಬಾರ್ ನ ಸಿಸಿಟಿವಿ ದೃಶ್ಯಾವಳಿಗಳನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೊಣಾಜೆ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ನಡೆದಿದ್ದ ವಿಜಯೋತ್ಸವ ಮೆರವಣಿಗೆ ಬಳಿಕ ಬೋಳಿಯಾರಿನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ನಡೆದಿತ್ತು.

- Advertisement -

Latest News

error: Content is protected !!