- Advertisement -
- Advertisement -
ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಅನಗತ್ಯವಾಗಿ ಸಂಚರಿಸಿದ ಕಾರಣ ಕಾರು, ಆಟೋ, ಬೈಕ್ ಸಹಿತ ಹಲವು ವಾಹನಗಳನ್ನು ಪಂಪ್ ವೆಲ್ ನಲ್ಲಿ ಪೊಲೀಸರು ವಶ ಪಡಿಸಿದ ಘಟನೆ ಇಂದು ನಡೆದಿದೆ.
ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.
ಅಗತ್ಯ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ಕೊಂಡೊಯ್ಯವ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
- Advertisement -