Friday, June 5, 2026
Homeತಾಜಾ ಸುದ್ದಿ4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಗುಂಡೇಟು

4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಗುಂಡೇಟು

- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಫೈರಿಂಗ್ ಆರೋಪಿಯ ಮೇಲೆ ಫೈರಿಂಗ್ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಫೈರಿಂಗ್ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚೆನ್ನೈ ಮೂಲದ ದಿನೇಶ್ ಬಂಧಿತ ಆರೋಪಿ. ಎರಡು ದಿನದ ಹಿಂದೆ 4 ವರ್ಷದ ಬಾಲೆಯನ್ನು ಅಪಹರಿಸಿ ಈತ ಅತ್ಯಾಚಾರ ಎಸಗಿದ್ದ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಎರಡು ದಿನದ ಹಿಂದೆ ತಡ ರಾತ್ರಿ ಮಗುವನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಪಾಪಿ ದಿನೇಶ್ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ ಮೂಲದ ದಿನೇಶ್ ನನ್ನು ಅರೆಸ್ಟ್ ಮಾಡಲು ಹೋಗಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!