Thursday, May 2, 2024
Homeಕರಾವಳಿಉಡುಪಿಉಡುಪಿ: ಆತ್ಮವಿಶ್ವಾಸ ಮೂಡಿಸುವ ಕ್ರಮವಾಗಿ ಪೊಲೀಸ್ ಜಾಥಾ

ಉಡುಪಿ: ಆತ್ಮವಿಶ್ವಾಸ ಮೂಡಿಸುವ ಕ್ರಮವಾಗಿ ಪೊಲೀಸ್ ಜಾಥಾ

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಹಾಗೂ ಇಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನರ ಮನಸ್ಸಿನಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಫೆ.23ರಂದು ಬುಧವಾರ ಪೊಲೀಸ್ ಮಾರ್ಗ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಜೋಡುಕಟ್ಟೆ ಮಾರ್ಗ ಜಾಥಾದ ಆರಂಭದ ಸ್ಥಳವಾಗಿತ್ತು. ಇದು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಕ್ಷಿಪ್ರ ಕಾರ್ಯಾಚರಣೆ ಪಡೆಯ 90 ಸಿಬ್ಬಂದಿ ಹಾಗೂ 200ಕ್ಕೂ ಹೆಚ್ಚು ಜಿಲ್ಲಾ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರದಾದ್ಯಂತ ಮೆರವಣಿಗೆ ನಡೆಸಿದರು.

ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಪೊಲೀಸ್ ಇಲಾಖೆ ಕರಾವಳಿ ಜಿಲ್ಲೆಗಳ ಜನರಲ್ಲಿ ಆತ್ಮವಿಶ್ವಾಸ ತುಂಬಲು ಈ ಕಸರತ್ತು ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಷ್ಣುವರ್ಧನ್ ಮಾತನಾಡಿ, ಯಾವುದೇ ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸನ್ನದ್ಧವಾಗಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸಮಾಜದಲ್ಲಿ ಶಾಂತಿ ಕದಡಲು ಮುಂದಾಗುವವರಿಗೆ ಇದೊಂದು ಎಚ್ಚರಿಕೆಯಾಗಿದೆ ಎಂದರು.

ನಾವು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ, ತಪ್ಪಿತಸ್ಥರು ಕಂಡು ಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ವಿಷ್ಣುವರ್ಧನ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!