Wednesday, June 3, 2026
Homeಕರಾವಳಿಮಂಗಳೂರುಪುತ್ತೂರು : ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ; ಆರೋಪಿಗೆ ಕಾಲಿಗೆ ಗುಂಡು...

ಪುತ್ತೂರು : ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ; ಆರೋಪಿಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು : ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಅ.22 ರಂದು ಬೆಳಗ್ಗಿನ ಜಾವ ನಡೆದಿದೆ. ಕಾಸರಗೋಡು ನಿವಾಸಿ ಅಬ್ದುಲ್ಲಾ (40) ಬಂಧಿತ ಆರೋಪಿ.

ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸಿಲ್ಲ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು. ಆಗ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಆಗ ಸಬ್ ಇನ್ಸ್‌ಪೆಕ್ಟರ್ ಜಂಬೂರಾಜ್ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ . ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿಯನ್ನು ಚಿಕಿತ್ಸೆಗಾಗಿ  ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!