Thursday, June 4, 2026
Homeಪ್ರಮುಖ-ಸುದ್ದಿಸಿಎಂ ಶೀಘ್ರ ಚೇತರಿಕೆಗೆ ಗಣ್ಯರಿಂದ ಶುಭ ಹಾರೈಕೆ

ಸಿಎಂ ಶೀಘ್ರ ಚೇತರಿಕೆಗೆ ಗಣ್ಯರಿಂದ ಶುಭ ಹಾರೈಕೆ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚೇತರಿಕೆಗೆ ಗಣ್ಯರು ಹಾರೈಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಸಚಿವರಾದ ರಮೇಶ್ ಜಾರಕಿಹೊಳಿ, ಸುಧಾಕರ್ ಸೇರಿದಂತೆ ಹಲವರು ಸಿಎಂ ಚೇತರಿಕೆಗೆ ಹಾರೈಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿ, ಸಚಿವರು ಈ ಸೋಂಕಿನಿಂದ ಚೇತರಿಸಿಕೊಳ್ಳಲಿ ಎಂದು ಹಾರೈಸುವುದಾಗಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

Latest News

error: Content is protected !!