Thursday, June 25, 2026
Homeಕರಾವಳಿಮಂಗಳೂರುಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಹಿನ್ನೆಲೆ ಕೆಲವು ಸೇವೆಗಳಲ್ಲಿ ವ್ಯತ್ಯಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಹಿನ್ನೆಲೆ ಕೆಲವು ಸೇವೆಗಳಲ್ಲಿ ವ್ಯತ್ಯಯ

- Advertisement -
- Advertisement -

ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಹಿನ್ನೆಲೆ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ದೇಗುಲದ ದೇವಳದ ಪ್ರಕಟಣೆ ತಿಳಿಸಿದೆ.ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯಲಿದೆ. ಈ ವೇಳೆ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದಿದೆ.


ನವೆಂಬರ್ 25ರಿಂದ ಡಿಸೆಂಬರ್ 12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.7)ಯಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27ರಿಂದ ಡಿ.12ರವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.

ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 26ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯ ಇರುವುದರಿಂದ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!