Thursday, July 16, 2026
Homeತಾಜಾ ಸುದ್ದಿಲಾಕ್ ಡೌನ್ ನಿಯಮ ಉಲ್ಲಂಘಿಸಿ ಜಾಲಿ ರೈಡ್: ನಟಿ ಪೂನಂ ಪಾಂಡೆ ಬಂಧನ

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಜಾಲಿ ರೈಡ್: ನಟಿ ಪೂನಂ ಪಾಂಡೆ ಬಂಧನ

- Advertisement -
- Advertisement -

ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹಾಟ್ ಬೆಡಗಿ ಪೂನಂ ಪಾಂಡೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಮುಂಬೈನ ಮರೀನ್ ಡ್ರೈವ್ ನಲ್ಲಿ ಬಿಎಂಡಬ್ಲ್ಯೂ ಕಾರ್ ನಲ್ಲಿ ಜಾಲಿ ರೈಡ್ ಮಾಡಿದ್ದಾಳೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣ ಪೂನಂ ಪಾಂಡೆ ಹಾಗೂ ಆಕೆ ಸ್ನೇಹಿತನನ್ನು ಬಂಧಿಸಿದ್ದಾರೆ. ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಸ್ಯಾಮ್ ಅಹ್ಮದ್ ವಿರುದ್ಧ ಜೀವಕ್ಕೆ ಅಪಾಯ ತರುವ ರೋಗದ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ, ಅಸಹಕಾರ ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವ ಪೂನಂ ಪಾಂಡೆ ಸದಾ ತನ್ನ ಹಾಟ್ ಹಾಟ್ ಫೋಟೋ ಮತ್ತು ವಿಡಿಯೋಗಳಿಂದ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುತ್ತಾಳೆ. ಈಗ ನಿಯಮ ಉಲ್ಲಂಘಿಸಿ ಪೊಲೀಸ್ ಅತಿಥಿಯಾಗಿದ್ದಾಳೆ.

- Advertisement -

Latest News

error: Content is protected !!