- Advertisement -
![]()
- Advertisement -
ಬೆಂಗಳೂರು : ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ ಮಹೇಶ್ ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ SSLC ಓದುತ್ತಿದ್ದ. ಮಹೇಶ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಶ್ ಎನಿಸಿಕೊಂಡಿದ್ದಾನೆ.



ಅವರ ತಾಯಿ ಮಲ್ಲವ್ವ ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಅವರ ಪುಟ್ಟ ಗುಡಿಸಲಿಗೆ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೋಗಿ ಅಭಿನಂದಿಸಿದ್ದಾರೆ . ಕಷ್ಟದಲ್ಲಿ ಓದಿದ ಸಾಧನೆ ಮಾಡಿದ ಬಾಲಕನ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement -


