Saturday, July 5, 2025
Homeಕರಾವಳಿಮಂಗಳೂರುಮಂಗಳೂರು :  ಹಿಂದೂ ಮುಖಂಡನ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋಗಳು ಪತ್ತೆ; ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ...

ಮಂಗಳೂರು :  ಹಿಂದೂ ಮುಖಂಡನ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋಗಳು ಪತ್ತೆ; ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎಂದು ಗುಸುಗುಸು

spot_img
- Advertisement -
- Advertisement -

ಮಂಗಳೂರಿನಲ್ಲಿ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರ ಆ ಮೊಬೈಲ್ ನ ದತ್ತಾಂಶಗಳನ್ನು ಎಕ್ಸ್ಟ್ರಾಕ್ಟ್  ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್ಟ್ರಾಕ್ಟ್  ​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ.

ಆ ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋದ ತುಣುಕುಗಳು ಪತ್ತೆ ಆಗಿವೆ. ಆ ಅಶ್ಲೀಲ ವಿಡಿಯೋಗಳು ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೊಲೀಸರೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಮೂಡಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಎಫ್​​ಐಆರ್​ ದಾಖಲಾಗಿದೆ.

- Advertisement -
spot_img

Latest News

error: Content is protected !!