Thursday, June 4, 2026
Homeಕರಾವಳಿಪುತ್ತೂರು : ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಪುತ್ತೂರು : ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಬೆಂಗಳೂರಿನಲ್ಲಿ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು : ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಟ್ಟಂತೆ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.ಕಡಬದ ನಿವಾಸಿ ಯಜ್ಞೇಶ್‌ ಎಂಬಾತನನ್ನು ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಗೈದಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆಯನ್ನು ಶಾಲಾ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯು ಬೆಂಗಳೂರಿನಲ್ಲಿ ಇರುವುದನ್ನು ಖಚಿತಪಡಿಸಿದ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.

ಬಳಿಕ ಮಡಿಕೇರಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ ಲಾಡ್ಜ್‌ ನಲ್ಲಿ ಸ್ಥಳ ಮಹಜರು ನಡೆಸಿ ಕೋರ್ಟಿಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!