Wednesday, June 3, 2026
Homeಕರಾವಳಿಉಪ್ಪಿನಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಉಪ್ಪಿನಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಕ್ಕಳ ಸಹಾಯವಾಣಿಯಲ್ಲಿ ದಾಖಲಾದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಅಬ್ದುಲ್ಲಾ ಬಿಳಿಯೂರು (36) ವಿರುದ್ಧ ಪ್ರಕರಣ ದಾಖಲಾಗಿದೆ.

ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಲಾಗಿತ್ತು. ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ಸಲ್ಲಿಸಿದ್ದಾನೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!