Thursday, June 4, 2026
Homeಕರಾವಳಿವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದು ಆರೋಪಿ ಪರಾರಿ

ವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದು ಆರೋಪಿ ಪರಾರಿ

- Advertisement -
- Advertisement -

ವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ.ಇದೀಗ ಆರೋಪಿ ಅಬ್ದುಲ್‌ ಸಮೀರ್‌ ಎಂಬಾತನ ವಿರುದ್ದ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯೊಂದರ ಬಳಿ 2019ನೇ ಸಾಲಿನ ನವಂಬರ್‌ ತಿಂಗಳಿನಿಂದ ಡಿಸೆಂಬರ್‌ ತಿಂಗಳ ಕೊನೆಯ ವಾರದ ತನಕ ಆತ ನಿರಂತರ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆಕೆಗೆ ಮೋಸ ಮಾಡಿದ್ದಲ್ಲದೆ, ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!