Thursday, June 4, 2026
Homeಕರಾವಳಿವಿಟ್ಲ: ಶಾಲಾ ವಿದ್ಯಾರ್ಥಿನಿಗೆ ಕಿರುಕುಳ; ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ವಿಟ್ಲ: ಶಾಲಾ ವಿದ್ಯಾರ್ಥಿನಿಗೆ ಕಿರುಕುಳ; ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಶಾಲಾ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದ. ಅಲ್ಲದೇ ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ.

ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ. ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ತಿಳಿಸಿದ್ದು, ಅದರಂತೆ ಪೋಷಕರು ದೂರು ನೀಡಿದ್ದಾರೆ.

- Advertisement -

Latest News

error: Content is protected !!