Monday, May 13, 2024
Homeಕರಾವಳಿಅಪ್ರಾಪ್ತ ಬಾಲಕಿಯ ಮೇಲೆ ಪರಿಚಿತ ಯುವಕನಿಂದ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ: ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ...

ಅಪ್ರಾಪ್ತ ಬಾಲಕಿಯ ಮೇಲೆ ಪರಿಚಿತ ಯುವಕನಿಂದ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ: ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಯುವಕ ಎಸ್ಕೇಪ್

spot_img
- Advertisement -
- Advertisement -

ಬೆಳ್ತಂಗಡಿ : ಪರಿಚಿತ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ ನಡೆಸಿ ಇದೀಗ ಐದು ತಿಂಗಳ ಗರ್ಭಿಣಿಯಾಗಿದ್ದು ಯುವಕನ ವಿರುದ್ಧ ಬಾಲಕಿ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

 ಅರವಿಂದ@ ಅಭಿ (24)  ಎಂಬಾತ ತನ್ನ ಬಳಿ ವಿಡಿಯೋ ಇರುವುದಾಗಿ ಹೇಳಿ ಬಾಲಕಿಗೆ ಬೆದರಿಕೆ ಹಾಕಿ ಮೂರು ವರ್ಷಗಳಿಂದ ಅಪ್ರಾಪ್ತ ಬಾಲಕಿಯ ಮೇಲೆ  ಅತ್ಯಾಚಾರವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.

ಬಾಲಕಿಯ ದೂರಿನಂತೆ ಅರವಿಂದ@ ಅಭಿ (24)  ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಘಟನೆ ಬಳಿಕ ಪರಾರಿಯಾಗಿದ್ದು ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!