Friday, May 3, 2024
Homeಕರಾವಳಿಸುಳ್ಯ; ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಯುವಕನ ಬಂಧನ

ಸುಳ್ಯ; ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಯುವಕನ ಬಂಧನ

spot_img
- Advertisement -
- Advertisement -

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನನ್ನು ಬಂಧಿಸಲಾಗಿದೆ.ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಬಂಧಿತ ಆರೋಪಿ.

ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ಅತ್ಯಾಚಾರವೆಸಗಿರೋದಾಗಿ ಬಾಲಕಿ ತಿಳಿಸಿದ್ದಾಳೆ ಎಂದು  ಆಕೆಯ ತಾಯಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!