Monday, April 29, 2024
Homeಕರಾವಳಿಪುತ್ತೂರು; ಪ್ರೀತಿಯ ಹೆಸರಿನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಇಬ್ಬರು...

ಪುತ್ತೂರು; ಪ್ರೀತಿಯ ಹೆಸರಿನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಇಬ್ಬರು ಯುವತಿಯರು

spot_img
- Advertisement -
- Advertisement -

ಪುತ್ತೂರು; ಪ್ರೀತಿಯ ನಾಟಕವಾಡಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಪುತ್ತೂರಿನ ನಿತೇಶ್ ರೈ ಎಂಬಾತನ ವಿರುದ್ಧ  ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.

ನಿತೇಶ್ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಅಲ್ಲಿನ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರೊಂದಿಗೆ ಸಲುಗೆ ಬೆಳೆಸಿಕೊಂಡು ಬಳಿಕ ಪ್ರೀತಿಸುತ್ತೇನೆ ಎಂದು ನಾಟಕವಾಡಿ ಅವರನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಸಿಕ್ಕಸಿಕ್ಕಲ್ಲಿ ಅಮಾಯಕ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರನ್ನ ತನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಈತನ ವಿರುದ್ದ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ನಿತೇಶ್ ಅಪ್ರಾಪ್ತ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು, ಆಕೆಯ ಬಳಿ ಪ್ರೀತಿಸುತ್ತಿದ್ದೇನೆ ಎಂದು ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿ, ನಂತರ ನಿರಂತರವಾಗಿ ಅಕೆಯ ಫೋಟೋಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ. ಅಲ್ಲದೆ ಈತನ ಸ್ನೇಹಿತರಿಗೂ ಆಕೆಯ ನಂಬರ್ ನೀಡಿ ಲೈಂಗಿಕವಾಗಿ ಸಹಕರಿಸುವಂತೆ  ಕಿರುಕುಳ ನೀಡುತ್ತಿದ್ದ. ಇದನ್ನು ತಿಳಿದ ಹುಡುಗಿಯ ಪೋಷಕರು ಹಾಗೂ ಸ್ಥಳೀಯರು ಸೇರಿ ಈತನನ್ನ ಹೆಡೆಮುರಿಕಟ್ಟಿ ಧರ್ಮದೇಟು ನೀಡಿದ್ದರು.

ಇದೀಗ ನಿತೇಶ್ ರೈ ವಿರುದ್ಧ ಸಂಪ್ಯ ಠಾಣೆಯಲ್ಲಿ ಇಬ್ಬರು ಯುವತಿಯರು ದೂರನ್ನು ನೀಡಿದ್ದು, ಫೋಕ್ಸೋ, ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಸದ್ಯ ಈತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!