Friday, May 17, 2024
Homeತಾಜಾ ಸುದ್ದಿಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು: ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ.‌ ಪ್ರತಿ ಲೀಟರ್ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ರಾಜ್ಯ ಸರ್ಕಾರಕ್ಕೆ ಮನವಿ ಮನವಿ ಮಾಡಿದೆ. ದರ ಹೆಚ್ಚಳ ಸಂಬಂಧ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲಾ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಳ ಮಾಡಲಿರುವ 3 ರೂಪಾಯಿಗಳಲ್ಲಿ ಕನಿಷ್ಠ ರೂಪಾಯಿ 2 ಅನ್ನು ಹಾಲು ಉತ್ಪಾದಕರಿಗೆ ಮತ್ತು ಉಳಿದ 1 ರೂಪಾಯಿಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!