- Advertisement -
- Advertisement -
ಬೆಂಗಳೂರು: ದಿವಂಗತ ಚಲನಚಿತ್ರ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.
ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯದಲ್ಲಿ ಸಹಕಾರ ಇಲಾಖೆಯಿಂದ ಪ್ರಶಸ್ತಿ ನೀಡಲಾಗುತ್ತಿದ್ದು ಮಾರ್ಚ್ 20 ರಂದು ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪುನೀತ್ ರಾಜ್ ಕುಮಾರ್ ಕೆಎಂಎಫ್ ರಾಯಭಾರಿಯಾಗಿ ನಂದಿನಿ ಉತ್ಪನ್ನಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರ ಜೀವಿತಾವಧಿಯ ಸೇವೆ ಗುರುತಿಸಿ ಮರಣೋತ್ತರ ಪ್ರಶಸ್ತಿ ನೀಡಲಾಗುತ್ತಿದೆ.
ನಿನ್ನೆಯಷ್ಟೇ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಕನ್ನಡ ಚಲನಚಿತ್ರ ಜೇಮ್ಸ್ ವಿಶ್ವಾದ್ಯಂತ ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಕಂಡಿದೆ.
- Advertisement -