Friday, June 26, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ಧಕ್ಕೆಯಾಗುವಂತಹ ಪೋಸ್ಟ್ , ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ಧಕ್ಕೆಯಾಗುವಂತಹ ಪೋಸ್ಟ್ , ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ಧಕ್ಕೆಯಾಗುವಂತಹ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರು ಈ ಬಗ್ಗೆ ದೂರು ನೀಡಿದ್ದರು. ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಾದಾರರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!