Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಕ್ರಮ ಕಟ್ಟಡದೊಳಗೆ ಅಕ್ರಮ ಮಾಂಸ ದಂಧೆ ಬಯಲು: ಬೆಳ್ತಂಗಡಿ ಪೊಲೀಸರಿಂದ ದಾಳಿ, ...

ಬೆಳ್ತಂಗಡಿ : ಅಕ್ರಮ ಕಟ್ಟಡದೊಳಗೆ ಅಕ್ರಮ ಮಾಂಸ ದಂಧೆ ಬಯಲು: ಬೆಳ್ತಂಗಡಿ ಪೊಲೀಸರಿಂದ ದಾಳಿ, ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ನಡೆಯುತ್ತಿದ್ದ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು. ಈ ಕ್ಯಾಂಟಿನ್ ಭಾನುವಾರ ಮಾತ್ರ ರಜೆ ಇದ್ದು, ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಹಣ ಮಾಡುವ ಉದ್ದೇಶದಿಂದ ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದರು.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.10 ರಂದು ಸಂಜೆ 5 ಗಂಟೆಗೆ ಪವನ್ ಕ್ಯಾಂಟಿನ್ ಮೇಲೆ ದಾಳಿ ಮಾಡಿದಾಗ ವೇಶ್ಯಾವಾಟಿಕೆ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟಿನ್ ಒಳಗಡೆ ಮಾಲೀಕ ಸುಂದರ್ ಶೆಟ್ಟಿ(55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಚಾಲಕ ವೃತ್ತಿ ಮಾಡುವ ಹುಸ್ಮಾನ್(38), ಬೆಳ್ತಂಗಡಿ ತಾಲೂಕಿನ ತಣ್ಷಿರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದರ್(45) ಮೂವರನ್ನು ಬಂಧಿಸಿದ್ದಾರೆ. 29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ನಿರೋಧ್ ಗಳು ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!