Saturday, June 6, 2026
Homeಕರಾವಳಿಪುತ್ತೂರು: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ!

ಪುತ್ತೂರು: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ!

- Advertisement -
- Advertisement -

ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ರವಿವಾರ ಬೆಳಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಉರುಳಿ ಬಿದ್ದಿತ್ತು. ಇದರಿಂದಾಗಿ ಲಾರಿಯಲ್ಲಿದ್ದ ಕೆಲವು ಕೋಳಿಗಳು ಸತ್ತು ಹೋಗಿದ್ದರೆ, ಇನ್ನು ಕೆಲವು ಕೋಳಿಗಳು ರಸ್ತೆಯಲ್ಲಿ ತುಂಬಿ ಹೋಗಿದ್ದವು.

ಅಪಘಾತದಲ್ಲಿ ವಿದ್ಯುತ್ ಕಂಬ ಮುರಿದ ಕಾರಣ ಪುತ್ತೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪುತ್ತೂರು ಮೆಸ್ಕಾಂ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!