Friday, June 5, 2026
Homeತಾಜಾ ಸುದ್ದಿಮೈಸೂರು ದಸರಾದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್ ಚಾಲನೆ

ಮೈಸೂರು ದಸರಾದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್ ಚಾಲನೆ

- Advertisement -
- Advertisement -

ಮೈಸೂರು: ನಾಡಹಬ್ಬ ದಸರಾ ಉತ್ಸವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆಯೋಜಿಸಲಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಚಾಲನೆ ನೀಡಿದರು.

ಮೈಸೂರಿನ ಕೆ.ಆರ್. ಆಸ್ಪತ್ರೆಯ ಬಳಿ ಇರುವ ವೃತ್ತದಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಸುನೀಲ್ ಕುಮಾರ್ ಚಾಲನೆ ನೀಡಿದರು.

ದಸರಾ ಹಬ್ಬದ ಹಿನ್ನೆಲೆಯಲ್ಲಿ ಇಂದಿನಿಂದ ಮೈಸೂರು ನಗರ ಕಲರ್ ಫುಲ್ ಆಗಿ ಮಿಂಚಲಿದ್ದು, 126 ಕಿಲೋ ಮೀಟರ್ ವರೆಗೂ ದೀಪಾಲಂಕಾರ ಮಾಡಲಾಗಿದೆ. ಮೈಸೂರು ನಗರದ 26 ವೃತ್ತಗಳಲ್ಲಿ ವಿವಿಧ ಬಗೆಯ ಲೈಟಿಂಗ್ಸ್ ಅಳವಡಿಕೆ ಮಾಡಲಾಗಿದೆ.

- Advertisement -

Latest News

error: Content is protected !!