Wednesday, June 3, 2026
Homeತಾಜಾ ಸುದ್ದಿರಾಜ್ಯಾದ್ಯಂತ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ನಿರ್ದೇಶನ

ರಾಜ್ಯಾದ್ಯಂತ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನಕ್ಕೆ ಇಂಧನ ಸಚಿವ ಸುನೀಲ್ ಕುಮಾರ್ ನಿರ್ದೇಶನ

- Advertisement -
- Advertisement -

ಬೆಂಗಳೂರು: ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇ 5 ರಿಂದ 20ರ ವರೆಗೆ ಟ್ರಾನ್ಸಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಸಚಿವ ವಿ. ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ಟ್ರಾನ್ಸ್ ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸಲು ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧಾರ ಮಾಡಿದ್ದು, ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್ ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲ ಹಂತದ ಅಧಿಕಾರಿಗಳಿಗೂ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ಸುನೀಲ್ ಕುಮಾರ್ ಸೂಚಿಸಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹದಿನೈದು ವರ್ಷಕ್ಕಿಂತ ಹಳೆಯ ಪರಿವರ್ತಕಗಳು ಇರುವ ಕಾರಣ ಮಳೆಗಾಲದಲ್ಲಿ ಸಿಡಿಲು ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಮತ್ತು ಅಧಿಕ ಲೋಡ್ ನಿಂದ ಟ್ರಾನ್ಸ್ ಫಾರ್ಮರ್ ಹಾನಿ ಸಾಧ್ಯತೆ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಹದಿನೈದು ದಿನಗಳ‌ ಕಾಲ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನ ನಡೆಯಲಿದೆ.

- Advertisement -

Latest News

error: Content is protected !!