Saturday, June 6, 2026
Homeಕರಾವಳಿಉಡುಪಿವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಇಂಧನ ಸಚಿವರು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ನಡೆಗೆ ಭಾರೀ...

ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಇಂಧನ ಸಚಿವರು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ನಡೆಗೆ ಭಾರೀ ಮೆಚ್ಚುಗೆ

- Advertisement -
- Advertisement -

ಕಾರ್ಕಳ : ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಇದರ ಜೊತೆಗೆ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.

ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸಚಿವ ಸುನೀಲ್ ಕುಮಾರ್ ಅವರಿಗೆ ಇದು ಮೊದಲ ಹುಟ್ಟುಹಬ್ಬ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸದೇ ವಿಶೇಷವಾಗಿ ಆಚರಿಸಿ ಗಮನ ಸೆಳೆದಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಅವರು ತಮ್ಮ ಹುಟ್ಟೂರಾದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಲ್ಲಾ ಲೈನ್ ಮ್ಯಾನ್ ಗಳನ್ನು ತಮ್ಮ ಮನೆಗೆ ಕರೆಸಿ ಭೋಜನ ಕೂಟ ಏರ್ಪಡಿಸಿದ್ದಾರೆ. ತಮ್ಮ ಮನೆಯಲ್ಲಿ ಲೈನ್ ಮ್ಯಾನ್ ಗಳ ಜೊತೆ ವಿಶೇಷ ಸಿಹಿ ಊಟ ಸವಿದು ಅವರ ಸಮಸ್ಯೆ ಆಲಿಸಿದ್ದಾರೆ. ಸಚಿವರು ಹುಟ್ಟುಹಬ್ಬ ಆಚರಿಸಿಕೊಂಡ ನಡೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

- Advertisement -

Latest News

error: Content is protected !!