- Advertisement -
- Advertisement -
ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ವಿದ್ಯುತ್ ದರ ಪರಿಷ್ಕರಣೆ ಪ್ರಕ್ರಿಯೆ ಮುಂದೂಡಲಾಗಿದೆ ಎನ್ನಲಾಗಿದೆ.
ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಏಪ್ರಿಲ್ ನಲ್ಲಿ ಹೊಸ ವಿದ್ಯುತ್ ದರ ಜಾರಿಗೆ ಬರಬೇಕಿತ್ತು. ಮಾರ್ಚ್ ಕೊನೆಯೊಳಗೆ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಬೇಕಿತ್ತು. ಆದರೆ, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.
- Advertisement -
