Saturday, June 6, 2026
Homeಕರಾವಳಿಸುಳ್ಯ:ಇನ್ವರ್ಟರ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು

ಸುಳ್ಯ:ಇನ್ವರ್ಟರ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು

- Advertisement -
- Advertisement -

ಸುಳ್ಯ: ಇನ್ವರ್ಟರ್ ಪ್ಲಗ್ ತೆಗೆಯುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ‌ ಗ್ರಾಮದಿಂದ ವರದಿಯಾಗಿದೆ.

ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಮೃತ ದುರ್ದೈವಿ.ಲಲಿತಾ ದಿನಾಲು ಮಲಗುವ ಮುನ್ನ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ.

ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!