Thursday, June 4, 2026
Homeಕರಾವಳಿಕಡಬದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು

ಕಡಬದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು

- Advertisement -
- Advertisement -

ಕಡಬ : ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಮೃತ ದುರ್ದೈವಿ.

ಲಿಜು ಇಂದು ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!