Thursday, June 4, 2026
HomeUncategorizedಉಡುಪಿ: ಸ್ನಾನ ಮಾಡುತ್ತಿದ್ದಾಗ ಬಾತ್ ರೂಂನಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಉಡುಪಿ: ಸ್ನಾನ ಮಾಡುತ್ತಿದ್ದಾಗ ಬಾತ್ ರೂಂನಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

- Advertisement -
- Advertisement -

ಉಡುಪಿ: ಸ್ನಾನ ಮಾಡುತ್ತಿದ್ದಾಗ ಬಾತ್ ರೂಂನಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.ಮೃತರನ್ನು ನೇರಳಕಟ್ಟೆ ನಿವಾಸಿ ವೆಂಕಟೇಶ ಗಾಣಿಗ(65) ಮೃತ ದುರ್ದೈವಿ.

ವೆಂಕಟೇಶ್ ಅವರು ಬಾತ್‌ರೂಮಿನಲ್ಲಿ ಸ್ನಾನ ಮಾಡುತ್ತಿರುವಾಗ ವಿದ್ಯುತ್ ಶಾಕ್‌ ಹೊಡೆದು ಬಿದ್ದರೆನ್ನಲಾಗಿದೆ.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ತೀವ್ರವಾಗಿ ಅಸ್ವಸ್ಥಗೊಂಡ ವೆಂಕಟೇಶ್ ಗಾಣಿಗ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!