Saturday, June 13, 2026
Homeಕರಾವಳಿಬೆಳ್ತಂಗಡಿ : ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ...

ಬೆಳ್ತಂಗಡಿ : ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶ: ಇಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಳ್ತಂಗಡಿ : ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಕಟ್ಟುತ್ತಿದ್ದ ಇಬ್ಬರಿಗೆ ವಿದ್ಯುತ್ ತಂತಿ ಸ್ವರ್ಶಿಸಿ ಗಂಭೀರ ಗಾಯಗೊಂಡಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಪ್ರಿಂಟರ್ಸ್ ಗೆ ಕಾರ್ಯಕ್ರಮದ ಬ್ಯಾನರ್ ಹಾಕಲು ಸಂಘದವರು ಕ್ವಾಂಟ್ರಾಕ್ಟ್  ನೀಡಿದ್ದು ಅದರಂತೆ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಇಂದು ಸಂಜೆ ಅಳವಡಿಸುತ್ತಿದ್ದರು. ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಸ್ಥಳೀಯರ ಸಹಕಾರದಿಂದ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!