Thursday, July 16, 2026
Homeಕರಾವಳಿಮಂಗಳೂರುಬಂಟ್ವಾಳ; ಕೋಳಿ ಅಂಕಕ್ಕೆ ಶಾಮಿಯಾನ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಬಂಟ್ವಾಳ; ಕೋಳಿ ಅಂಕಕ್ಕೆ ಶಾಮಿಯಾನ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

- Advertisement -
- Advertisement -

ಬಂಟ್ವಾಳ; ಕೋಳಿ ಅಂಕಕ್ಕೆ ಶಾಮಿಯಾನ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ನಡೆದಿದೆ,.

ಕೋಳಿ ಅಂಕಕ್ಕಾಗಿ  ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತ ಯುವಕ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

- Advertisement -

Latest News

error: Content is protected !!