Tuesday, September 10, 2024
Homeಕರಾವಳಿಉಡುಪಿಉಡುಪಿ: ನದಿಯಲ್ಲಿ ವೈದ್ಯರ ಪಿಪಿಇ ಕಿಟ್ ಪತ್ತೆ, ಆತಂಕದಲ್ಲಿ ಸ್ಥಳೀಯ ಜನತೆ

ಉಡುಪಿ: ನದಿಯಲ್ಲಿ ವೈದ್ಯರ ಪಿಪಿಇ ಕಿಟ್ ಪತ್ತೆ, ಆತಂಕದಲ್ಲಿ ಸ್ಥಳೀಯ ಜನತೆ

spot_img
- Advertisement -
- Advertisement -

ಉಡುಪಿ ಜಿಲ್ಲೆಯ ಅಲೆವೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕೊಡಂಗಳ ನದಿಯಲ್ಲಿ ಕೊರೊನಾ ವೈದ್ಯಕೀಯ ಸಿಬ್ಬಂದಿಗಳು ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ) ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಸೋಂಕಿತರನ್ನು ಚಿಕಿತ್ಸೆಗೆ ಒಳಪಡಿಸುವಾಗ ಈ ವಿಶೇಷ ಕಿಟ್ ಧರಿಸಲಾಗುತ್ತದೆ. ಉಪಯೋಗಿಸಿದ ಬಳಿಕ ಕಿಟ್‍ನ್ನು ಅತ್ಯಂತ ಎಚ್ಚರಿಕೆಯಿಂದ ವಿಲೇವಾರಿ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನವಿದೆ. ವೈರಾಣುಗಳ ಸಂಪರ್ಕಕ್ಕೆ ಬರುವ ಈ ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದರೆ ರೋಗ ಹರಡುವ ಸಾಧ್ಯತೆ ಇದ್ದು, ಗ್ರಾಮಸ್ಥರು ಈ ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.

ಮೇಲ್ನೋಟಕ್ಕೆ ಇದು ಬಳಸಿ ಎಸೆದ ಕಿಟ್ ನಂತೆ ಕಾಣುತ್ತಿದ್ದು, ಸ್ಥಳೀಯ ಆಶಾ ಕಾರ್ಯಕರ್ತೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಡಂಗಳ ನದಿಯ ಸೇತುವೆಯ ಮೇಲ್ಭಾಗದಿಂದ ಅಂಬುಲೆನ್ಸ್ ಚಾಲಕರು ಇದನ್ನು ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ನದಿಯ ನೀರನ್ನು ಗ್ರಾಮಸ್ಥರು ಬಳಸುತ್ತಿರುವ ಕಾರಣ ಇಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.

ಸ್ಥಳೀಯ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿ, ಯಾರಾದರು ಎಸೆಯದೆ ಇಲ್ಲಿ ಬಂದು ಬಿದ್ದಿರುವ ಸಾಧ್ಯತೆ ಇಲ್ಲ. ಆ ರಸ್ತೆಯಲ್ಲಿ ಅಂಬುಲೆನ್ಸ್ ಸಂಚಾರ ಕಡಿಮೆ. ರಾಷ್ಟ್ರೀಯ ಹೆದ್ದಾರಿ ತಪ್ಪಿಸಿ ಒಳ ರಸ್ತೆಯಲ್ಲಿ ಬಂದು ಎಸೆದಿರುವ ಸಾಧ್ಯತೆ ಇದೆ. ಸ್ಥಳೀಯ ಯುವಕರು ಈಜುವ ಸಂದರ್ಭ ಕಿಟ್ ಇರುವುದು ಗಮನಕ್ಕೆ ಬಂದಿದೆ. ಮಣಿಪಾಲ ಪೊಲೀಸರು ಸ್ಥಳಕ್ಕಾಗಮಿಸಿದ್ದರು ಎಂದು ಅವರು ಹೇಳಿದರು.

- Advertisement -
spot_img

Latest News

error: Content is protected !!