Thursday, June 4, 2026
HomeUncategorizedಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಕುಮಾರ್ ಪುತ್ತಿಲ ಯಾವ ಸೀಮೆ ಹಿಂದುತ್ವವಾದಿ?: ಕಲ್ಲಡ್ಕ...

ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಕುಮಾರ್ ಪುತ್ತಿಲ ಯಾವ ಸೀಮೆ ಹಿಂದುತ್ವವಾದಿ?: ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ

- Advertisement -
- Advertisement -

ಸುಳ್ಯ: ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ ಯಾವ ಸೀಮೆ ಹಿಂದುತ್ವವಾದಿ? ಎಂದು  ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪುತ್ತಿಲರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಅವರ ಗೃಹಪ್ರವೇಶಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ ಎಂದು ಕಠೋರವಾಗಿ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆ. ಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.

- Advertisement -

Latest News

error: Content is protected !!