Sunday, June 16, 2024
Homeಅಪರಾಧ₹2 ಸಾವಿರಕ್ಕಾಗಿ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ್ಯಾ ಕೊಲೆ: ಆರೋಪಿ ಬಾಲಕನ ಸೆರೆ

₹2 ಸಾವಿರಕ್ಕಾಗಿ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ್ಯಾ ಕೊಲೆ: ಆರೋಪಿ ಬಾಲಕನ ಸೆರೆ

spot_img
- Advertisement -
- Advertisement -

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ್ಯಾ (20) ಕೊಲೆ ಪ್ರಕರಣವನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಪ್ರಬುದ್ದ್ಯಾ ಅವರ ತಮ್ಮನ ಸ್ನೇಹಿತನಾಗಿರುವ ಬಾಲಕನನ್ನು ಸೆರೆ ಹಿಡಿದಿದ್ದಾರೆ.

ವಿದ್ಯಾರ್ಥಿನಿ ಪ್ರಬುದ್ದ್ಯಾ ಅವರು ಪದ್ಮನಾಭನಗರದ ಬೃಂದಾವನ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಮೃತಪಟ್ಟಿದ್ದರು. ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದ ತಾಯಿ, ಕೊಲೆ ಆರೋಪದಡಿ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು, ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಬಾಲಕನನ್ನು ಬಂಧಿಸಿದ್ದಾರೆ.

‘ಆರೋಪಿ ಬಾಲಕ, ಪ್ರಬುದ್ದ್ಯಾ ಅವರ ಪರ್ಸ್‌ನಿಂದ ₹ 2 ಸಾವಿರ ಕಳ್ಳತನ ಮಾಡಿದ್ದ. ಇದು ಗೊತ್ತಾಗುತ್ತಿದ್ದಂತೆ, ಹಣ ವಾಪಸು ನೀಡುವಂತೆ ಪ್ರಬುದ್ದ್ಯಾ ಒತ್ತಾಯಿಸಿದ್ದರು. ಇದೇ ಕಾರಣಕ್ಕೆ ಬಾಲಕ, ಪ್ರಬುದ್ದ್ಯಾ ಅವರನ್ನು ಕೊಲೆ ಮಾಡಿದ್ದಾನೆ’ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಪ್ರಕರಣದ ಬಗ್ಗೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ, ‘ಪ್ರಬುದ್ದ್ಯಾ ಅವರ ತಮ್ಮನ ಸ್ನೇಹಿತನಾಗಿರುವ ಬಾಲಕನೇ ಆರೋಪಿ ಎಂಬುದು ಗೊತ್ತಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಪುರಾವೆಗಳನ್ನು ಸಂಗ್ರಹಿಸಿ ಬಾಲಕನ್ನು ವಶಕ್ಕೆ ಪಡೆಯಲಾಗಿದೆ. ಈತ ಬಾಲಕ ಆಗಿರುವುದರಿಂದ ಹೆಸರು ಬಹಿರಂಗಪಡಿಸಲಾಗದು. ಈತನನ್ನು ಬಾಲ ನ್ಯಾಯ ಮಂಡಳಿ ಎದುರು ಹಾಜರುಪಡಿಸಿ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದಿದ್ದಾರೆ.

- Advertisement -
spot_img

Latest News

error: Content is protected !!